ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

 

ದಾವಣಗೆರೆ: ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಡಿಸೆಂಬರ್ 5 ಕೊನೆಯ ದಿನವಾಗಿದೆ.

ವಿಶೇಷ ಘಟಕ ಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾμÉ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂಗಳ ಸ್ಟೈಫೆಂಡ್ ನೀಡಲಾಗುವುದು. ತರಬೇತಿಯು 2025ರ ಜನವರಿಯಿಂದ ಡಿಸೆಂಬರ್‍ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ.

ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ. ತರಬೇತಿಯ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದುರುಗಿಸುವುದಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇಲ್ಲಿ, ಮೊ.9480841218 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon