ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ವಿಜ್ಞಾನ ಪ್ರತಿಭಾನ್ವೇಷಣೆ ಕಾರ್ಯಕ್ರಮದಡಿ ಪ್ರಶ್ನೋತ್ತರ ಹೊತ್ತಿಗೆಯನ್ನು ಪದವಿಪೂರ್ವ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕವಾಗುವಂತೆ ಭೌತ ವಿಜ್ಞಾನ, ರಸಾಯನ ವಿಜ್ಞಾನ, ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳಲ್ಲಿ ನುರಿತ ಸಂಪನ್ಮೂಲ ತಜ್ಞರ ಸಹಕಾರದೊಂದಿಗೆ ಹೊರತರಲಾಗಿದೆ.
ಪ್ರಶ್ನೋತ್ತರ ಪುಸ್ತಕವನ್ನು ಅಕಾಡೆಮಿಯ ವೆಬ್‍ತಾಣ https://kstacaademy.in/kn/sts-k/ ದಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ್ ತಿಳಿಸಿದ್ದಾರೆ.