ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

 

ಚಿತ್ರದುರ್ಗ: ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದಿಂದ ರಾಜ್ಯದ ಪಾರಂಪರಿಕವಾಗಿ ಚರ್ಮಗಾರಿಕೆಯಲ್ಲಿ ತೊಡಗಿರುವ ಕುಟುಂಬಗಳ ಯುವ ಜನರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಯಲ್ಲಿ ಬರುವ ಮಾದಿಗ, ಸಮಗಾರ, ಡೋರ, ಆದಿ ಜಾಂಬವ, ಮಚಗಾರ, ಮೋಚಿ ಹಾಗೂ ಇತರೆ ಚರ್ಮಗಾರಿಕೆಗೆ ಒಳಪಡುವ ಸಮುದಾಯಗಳಿಗೆ, ಪ್ರಸ್ತುತ ಚರ್ಮ ಉದ್ಯಮದಲ್ಲಿ ಚಾಲ್ತಿಯಲ್ಲಿರುವ ಹೊಸ ತಂತ್ರಜ್ಞಾನಗಳು, ವಿನ್ಯಾಸಗಳು ಹಾಗೂ ಮಾರುಕಟ್ಟೆಯ ಬೇಡಿಕೆಗಳನ್ನು ಪರಿಚಯಿಸಲು ಚರ್ಮ ಆಧಾರಿತ ಕೈಗಾರಿಕೆಗಳಲ್ಲಿ ಮುಂಚೂಣಿಯಲ್ಲಿರುವ ಆಗ್ರಾ, ಉತ್ತರ ಪ್ರದೇಶ ಹಾಗೂ ಕೋಲ್ಕತ್ತ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿರುವ “ಮೆ. ಸೆಂಟ್ರಲ್ ಫುಟ್‌ವೇರ್ ಟ್ರೆöÊನಿಂಗ್ ಇನ್‌ಸ್ಟಿಟ್ಯೂಟ್” ಕೇಂದ್ರದಲ್ಲಿ 60 ದಿನಗಳ ವಸತಿ ಸಹಿತ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮವಾದ “ ಪುಟ್‌ವೇರ್ ಡಿಸೈನಿಂಗ್ ಅಂಡ್ ಪ್ರೊಡಕ್ಷನ್” ತರಬೇತಿ ಪಡೆಯಲು ಕಳುಹಿಸಲಾಗುವುದು. ಆಸಕ್ತ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Advertisement

ಅರ್ಜಿ ಸಲ್ಲಿಸಲು ಕನಿಷ್ಟ 10ನೇ ತರಗತಿ ತೇರ್ಗಡೆ ಹೊಂದಿರಬೇಕು. 18 ರಿಂದ 40 ವರ್ಷಗಳ ವಯೋಮಿತಿ ಹೊಂದಿರಬೇಕು. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ವೈಯಕ್ತಿಕ ವಿವರ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಆಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಪಾಸ್ ಪೋರ್ಟ್ ಅಳತೆಯ 5 ಫೋಟೊಗಳನ್ನು ಸಲ್ಲಿಸಲು ಸೂಚಿಸಿದೆ.

ಅರ್ಹ ಅಭ್ಯರ್ಥಿಗಳಿಗೆ ಪ್ರಯಾಣದ ವೆಚ್ಚಗಳನ್ನು ನಿಗಮದಿಂದ ಭರಿಸಲಾಗುವುದು. ತರಬೇತಿ ಸಂಸ್ಥೆಯಲ್ಲಿ ಉಪಹಾರ, ಬೋಜನಾ ಹಾಗೂ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಅಭ್ಯರ್ಥಿಗಳಿಗೆ ತರಬೇತಿ ಅವಧಿಗೆ ಮಾತ್ರ ದಿನಕ್ಕೆ ರೂ.200/ ರಂತೆ 60 ದಿನಗಳಿಗೆ ರೂ.12,000/ ಗಳನ್ನು ವೇಜ್ ಲಾಸ್ ಅಲೊವೆನ್ಸ್ (ತಿಚಿge ಟoss ಚಿಟಟoತಿಚಿಟಿಛಿe) ಪಾವತಿಸಲಾಗುವುದು. ಮೊದಲನೇ ಹಂತದಲ್ಲಿ ಮೆ. ಸೆಂಟ್ರಲ್ ಪುಟ್‌ವೇರ್ ಟ್ರೆöÊನಿಂಗ್ ಸೆಂಟರ್ ಉತ್ತರ ಪ್ರದೇಶದ ಆಗ್ರಾದಲ್ಲಿ ಆಗಸ್ಟ್ 19 ರಿಂದ ಪ್ರಾರಂಭವಾಗಿ ಅಕ್ಟೋಬರ್ 18 ರಂದು ಮುಕ್ತಾಯಗೊಳ್ಳುವ ತರಬೇತಿಯನ್ನು 30 ಅಭ್ಯರ್ಥಿಗಳಿಗೆ ನಿಯೋಜಿಸಲಾಗುವುದು.

ಅಗತ್ಯ ದಾಖಲೆಗಳೊಂದಿಗೆ ಚಿತ್ರದುರ್ಗ ನಗರದ ಬಿ.ಡಿ.ರೋಡ್, ಸ್ತಿçà ಶಕ್ತಿ ಶಾಪಿಂಗ್ ಕಾಂಪ್ಲೆಕ್ಸ್, ಲಿಡ್‌ಕರ್ ಲೆದರ್ ಎಂಪೋರಿಯAನ ಡಾ.ಬಾಬು

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement