ಬೆಂ, ಗ್ರಾ. ಜಿಲ್ಲೆ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ ರೂ. 25,000/- ಗಳಂತೆ ಶಿಷ್ಯ ವೇತನ ನೀಡಲು ಆಫ್ ಲೈನ್ನಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕಛೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಡಿಸೆಂಬರ್ 14 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ- 08029787448, ದೇವನಹಳ್ಳಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ- 08027681784, ದೊಡ್ಡಬಳ್ಳಾಪುರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ- 08027623681, ನೆಲಮಂಗಲ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ- 080 27723172, ಹೊಸಕೋಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ- 08027931528 ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.