ಚಿತ್ರದುರ್ಗ: ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು, ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿಪೂರ್ವಕವಾಗಿ ಆಚರಿಸಬೇಕು, ಹಸಿರು ಪಟಾಕಿಯನ್ನು ಹೊರತುಪಡಿಸಿ, ಇತರೆ ಪಟಾಕಿಯ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ತಿಳಿಸಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿಯನ್ನು ಜಿಲ್ಲೆಯಾದ್ಯಂತ ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ ಹಾಗೂ ಜನರ ಆರೋಗ್ಯ ಹದಗೆಡಿಸುತ್ತಿದೆ, ಅಲ್ಲದೆ ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟು ಮಾಡುತ್ತಿದೆ. ಹೀಗಾಗಿ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸವುದು ಸೂಕ್ತವಾಗಿರುತ್ತದೆ.