ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-1 ಆರೋಪಿ ಪವಿತ್ರಾಗೌಡಗೆ ಜೈಲೇ ಗತಿ ಆಗಿದ್ದು, ನ.21ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪವಿತ್ರಾ ಗೌಡ , ಅನುಕುಮಾರ್. ನಾಗರಾಜ್, ಲಕ್ಷ್ಮಣ್, ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಈ ಪೈಕಿ ಎ-1 ಆರೋಪಿ ಪವಿತ್ರಾಗೌಡಗೆ ಜೈಲೇ ಗತಿ ಆಗಿದ್ದು, ನ.21 ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
