ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್‌ನ ಬೆಲೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೀಟರ್‌ಗೆ 300 ಪಾಕಿಸ್ತಾನ ರೂಪಾಯಿ ದಾಟಿದೆ.
ಪ್ರಧಾನಮಂತ್ರಿ ಅನ್ವಾರುಲ್ ಹಕ್ ಕಾಕರ್ ನೇತೃತ್ವದ ಉಸ್ತುವಾರಿ ಸರ್ಕಾರ ಗುರುವಾರ ಪೆಟ್ರೋಲ್ ಅನ್ನು ಲೀಟರ್‌ಗೆ 14.91 ರೂ. ಹಾಗೂ ಹೈಸ್ಪೀಡ್ ಡೀಸೆಲ್ ಬೆಲೆಯನ್ನು 18.55 ರೂ.ಯಷ್ಟು ಹೆಚ್ಚಿಸಿದೆ.
ಇನ್ನು ಪಾಕಿಸ್ತಾನದಲ್ಲಿ ಬೆಲೆ ಏರಿಕೆಗಳಿಂದಾಗಿ ಇದೀಗ ಪೆಟ್ರೋಲ್ ಬೆಲೆ 305.36 ರೂ.ಗೆ ತಲುಪಿದ್ದು, ಡೀಸೆಲ್ ಬೆಲೆ 311 ರೂ. ಆಗಿದೆ.