ಬೆಂಗಳೂರು : ಎಫ್ ಎಸ್ ಎಲ್ ವರದಿ ಬಂದ ಬಳಿಕ ಒಂದೊಮ್ಮೆ ಯಾರೋ ಕಿಡಿಗೇಡಿಗಳು ಪಾಕ್ ಪರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಸರ್ಕಾರ ಈ ಬಗ್ಗೆ ಗಂಭೀರ ಕ್ರಮವನ್ನು ಕೈಗೊಳ್ಳುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿರೋದು ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಮಾತೇ ಇಲ್ಲ ಎಂದರು. ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಬೀತಾದರೆ ಯಾರೇ ಆಗಲಿ ಅಂಥವರ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು ಎಂದ ಸಿಎಂ, ಪಾಕ್ ಪರ ಘೋಷಣೆ ಕೂಗುವವರಿಗೆ ವಿಧಾನಸೌಧವಾದರೇನು? ಎಲ್ಲಾದರೇನು? ಅಂತಾ ಅವರು ಮರುಪ್ರಶ್ನಿಸಿದರು.