ಬೆಂಗಳೂರು: ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಧ್ವನಿ ಪರಿಶೀಲನೆಗಾಗಿ ವಿಡಿಯೋವನ್ನು ಎಫ್ಎಸ್ಎಲ್ಗೆ ಕಳುಹಿಸಲಾಗಿದ್ದು, ಇದರ ಬೆನ್ನಲ್ಲೇ ಮೂವರು ವಾಯ್ಸ್ ಸ್ಯಾಂಪಲ್ ಅನ್ನು ಎಫ್ ಎಸ್‌ಎಲ್ ಗೆ ರವಾನೆ ಮಾಡಿದ್ದಾರೆ.
ಪಾಕ್ ಪರ ಘೋಷಣೆ ಕೂಗಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದು, ಈವರೆಗೆ 26 ಜನರ ಪಟ್ಟಿ ಮಾಡಿದ್ದು, ಈ ಪೈಕಿ ಮೂವರು ಪ್ರಮುಖ ಆರೋಪಿಗಳ ವಾಯ್ಸ್ ಸ್ಯಾಂಪಲ್ ಅನ್ನು ಎಫ್ ಎಸ್ ಎಲ್ ಗೆ ರವಾನಿಸಿರುವ ಪೊಲೀಸರು ಸದ್ಯ ಎಸ್ ಎಲ್ ವರದಿಗಾಗಿ ಕಾಯುತ್ತಿದ್ದಾರೆ.ವರದಿ ಬಳಿಕ ಮತ್ತಷ್ಟು ಮಾಹಿತಿ ಸಂಗ್ರಹಿಸಿ ತನಿಖೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬ್ಯಾಡಗಿಯ ಮೆಣಸಿನಕಾಯಿ ವ್ಯಾಪಾರಿಯನ್ನು ಮಹ್ಮದ್ ಶಫಿ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.