ಪಿಎಂ ಕಿಸಾನ್ ಹಣ ಇಂದು ಬಿಡುಗಡೆ ಆಗಲಿದೆ. ಪ್ರಧಾನಿ ನರೇಂದ್ರ ಮೋದಿ ಇಂದು 18ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ.
ಮಹಾರಾಷ್ಟ್ರಕ್ಕೆ ಪ್ರಧಾನಿ ಮೋದಿ ಇಂದು ಭೇಟಿ ನೀಡಲಿದ್ದು, ಇಂದೇ ಪಿಎಂ ಕಿಸಾನ್ ಹಣ ಬಿಡುಗಡೆ ಹಾಗೂ ಇತರ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಇದರೊಂದಿಗೆ ದೇಶದ 9.4 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ ತಲಾ 2,000 ರೂ. ಜಮೆ ಆಗಲಿದೆ. ಕೇಂದ್ರದಿಂದ ಇಂದು ಪಿಎಂ ಕಿಸಾನ್ ಫಲಾನುಭವಿಗಳಿಗೆ ಒಟ್ಟು 20,000 ಕೋಟಿ ರೂ. ಹಣ ಬಿಡುಗಡೆ ಆಗಲಿದೆ.