ಪಿಎಚ್‍ಡಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನ

 

ಚಿತ್ರದುರ್ಗ: 2023-24ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣವಧಿ ಪಿಎಚ್‍ಡಿ ಅಧ್ಯಯನ ಪ್ರಾರಂಭಿಸಿರುವ (ದಿನಾಂಕ 2023ರ ಜನವರಿ 30 ಮತ್ತು ಅದರ ನಂತರ ಪ್ರಥಮ ವರ್ಷದ ಪಿಹೆಚ್‍ಡಿ ಪ್ರಾರಂಭಿಸಿರಬೇಕು) ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ) 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ, ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2024ರ ಜನವರಿ 10 ಕೊನೆಯ ದಿನ.

2023-24ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ದ ವಿಶ್ವ ವಿದ್ಯಾಲಯಗಳಲ್ಲಿ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಮಾತ್ರ ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ https://bcwd.karnataka.gov.in  ವೆಬ್‍ಸೈಟ್ ನಲ್ಲಿ ನೋಡಬಹುದು.

Advertisement

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8050770004 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

========

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement