ಕೇರಳ: ಆರು ಮಂದಿ ಕಿಡಿಗೇಡಿಗಳು ತನ್ನನ್ನು ಅಪಹರಿಸಿ, ಥಳಿಸಿ ಬೆನ್ನಿನ ಮೇಲೆ ಪಿಎಫ್ ಐ ಎಂದು ಬರೆದಿರುವುದಾಗಿ ದೂರು ನೀಡಿದ್ದ ಯೋಧ ಹಲ್ವೀಲ್ ಶೈನ್ ಕುಮಾರ್ ಹಾಗೂ ಗೆಳೆಯನನ್ನುಪೊಲೀಸರ್ ವಶಪಡೆಕೊಂಡಿದ್ದಾರೆ.
ಘಟನೆಗೆ ಸುಳ್ಳು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಇಬ್ಬರನ್ನೂ ವಿಚಾರಣೆಗೊಳಪಡಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಯೋಧ ಶೈನ್ ಕುಮಾರ್ ಮತ್ತು ಆತನ ಗೆಳೆಯ ನೀಡಿರುವ ಹೇಳಿಕೆ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.
ತಾನು ಫೇಮಸ್ ಆಗಬೇಕು ಎಂಬ ಉದ್ದೇಶದಿಂದ ಯೋಧ ಶೈನ್ ಕುಮಾರ್ ಈ ಕಥೆಯನ್ನು ಕಟ್ಟಿದ್ದಾನೆ ಎಂದು ಗೆಳೆಯ ಪೊಲೀಸರ ವಿಚಾರಣೆ ವೇಳೆ ಬಾಯ್ಬಿಟ್ಟಿರುವುದಾಗಿ ವರದಿ ತಿಳಿಸಿದೆ.
ಕುಮಾರ್ ಮನೆಯ ಸಮೀಪದ ರಬ್ಬರ್ ತೋಟದೊಳಗೆ ಹೋಗಿ ಬೆನ್ನಿನ ಮೇಲೆ ಪಿಎಫ್ ಐ ಎಂದು ಬರೆದು, ಥಳಿಸುವಂತೆ ಗೆಳೆಯನಿಗೆ ಸೂಚಿಸಿದ್ದ ಈ ವೇಳೆ ಗೆಳೆಯ ಮದ್ಯದ ಮತ್ತಿನಲ್ಲಿದ್ದ ಗೆಳೆಯ ಡಿಎಫ್ ಐ ಅಂತ ಬರೆದಿದ್ದ, ಆದರೆ ಕುಮಾರ್ ಪಿಎಫ್ ಐ ಎಂದು ಬರೆಯುವಂತೆ ಸೂಚಿಸಿ ನಂತರ ತನಗೆ ಹೊಡೆಯುವಂತೆ ಹೇಳಿದ್ದ. ಮದ್ಯ ಸೇವಿಸಿದ್ದರಿಂದ ತನಗೆ ಹೊಡೆಯಲು ಆಗಲಿಲ್ಲ. ಆಗ ಕುಮಾರ್ ನೆಲದ ಮೇಲೆ ಹಾಕಿ ಎಳೆದೊಯ್ಯುವಂತೆ ಹೇಳಿದ. ಅದೂ ಕೂಡಾ ತನ್ನಿಂದ ಸಾಧ್ಯವಾಗಲಿಲ್ಲ. ಕೊನೆಗೆ ಕೈಯನ್ನು ಹಿಂದಕ್ಕೆ ಕಟ್ಟಿ, ಬಾಯಿಗೆ ಟೇಪ್ ಹಾಕಿ ತೆರಳುವಂತೆ ಹೇಳಿದ್ದ ಎಂಬುದಾಗಿ ಗೆಳೆಯ ಪೊಲೀಸರಿಗೆ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ.
ನಿನ್ನೆಆರು ಮಂದಿ ದುಷ್ಕರ್ಮಿಗಳು ತನ್ನನ್ನು ಅಪಹರಿಸಿ ಮನೆ ಸಮೀಪದ ರಬ್ಬರ್ ತೋಟಕ್ಕೆ ಎಳೆದೊಯ್ದು, ಹಿಗ್ಗಾಮುಗ್ಗಾ ಥಳಿಸಿ ಬೆನ್ನಿನ ಮೇಲೆ ಪಿಎಫ್ ಐ ಎಂದು ಪೈಂಟ್ ನಿಂದ ಬರೆದಿರುವುದಾಗಿ ಯೋಧ ಶೈನ್ ಕುಮಾರ್ ಪೊಲೀಸರಿಗೆ ದೂರು ನೀಡಿದ್ದ.