ಪಿಒಪಿ ಗಣೇಶ ಮೂರ್ತಿ ಮಾರುವಂತಿಲ್ಲ -ನಗರಸಭೆ ಪೌರಾಯುಕ್ತೆ ಎಂ.ರೇಣುಕಾ

 

ಚಿತ್ರದುರ್ಗ: ಪರಿಸರಕ್ಕೆ ಹಾನಿಕಾರಕವಾಗಿರುವ ಪಿಒಪಿ ಮತ್ತು ಲೋಹ ಮಿಶ್ರಿತ ಬಣ್ಣದಿಂದ ತಯಾರಿಸಿದ ವಿಗ್ರಹಗಳ ಬಳಕೆಯನ್ನು  ಸರ್ಕಾರ ನಿμÉೀಧಿಸಲಾಗಿದ್ದು, ಪರಿಸರಕ್ಕೆ ಹಾನಿಕಾರವಾಗುವ ಇಂತಹ ವಿಗ್ರಹಗಳ ಮಾರಾಟ ಹಾಗೂ ಬಳಕೆಗೆ ಅವಕಾಶವಿಲ್ಲ ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರಾದ ಎಂ.ರೇಣುಕಾ ಹೇಳಿದರು

ಪಿಒಪಿ ಗಣೇಶ ವಿಗ್ರಹಗಳ ಮಾರಾಟ ಹಾಗೂ ಬಳಕೆ ಕುರಿತಂತೆ ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಬೆನ್ನಲ್ಲೇ ಚಿತ್ರದುರ್ಗ ನಗರಸಭೆಯ ಅಧಿಕಾರಿಗಳ ತಂಡ ಚಿತ್ರದುರ್ಗ ನಗರದ ವಿವಿಧ ಭಾಗಗಳಲ್ಲಿ ಭೇಟಿ ನೀಡಿ ಪರಸರ ಗಣೇಶೋತ್ಸವ ಹಿನ್ನೆಲೆಯಲ್ಲಿ ಮಣ್ಣಿನ ಗಣೇಶ ಮಾಡಿ, ಯಾವುದೇ ಕಾರಣದಿಂದಾಗಿ ಪಿಒಪಿ ಬಳಸಬೇಡಿ ಎಂದು ಜಾಗೃತಿ ಮೂಡಿಸುವ ಕೆಲಸ ಮಾಡಿದರು.

Advertisement

ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಎಲ್ಲಾ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡುತ್ತಿದ್ದು ಪಿಒಪಿ ಗಣೇಶ ವಿಗ್ರಹಗಳ ಮಾರಾಟ ಅಥವಾ ಬಳಕೆ ಕಂಡುಬಂದಲ್ಲಿ ಕೂಡಲೆ ಅದನ್ನು ವಶಪಡಿಸಿಕೊಳ್ಳಬೇಕು ಎಂದು ಪೌರಾಯುಕ್ತರಾದ ಎಂ ರೇಣುಕಾ ಅವರು ಹೇಳಿದರು.

ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ನಿರ್ದಿಷ್ಟ ಜಲಮೂಲಗಳನ್ನು ನಿಗದಿಪಡಿಸಲಾಗುತ್ತಿದ್ದು, ಗಣೇಶಮೂರ್ತಿ ವಿಸರ್ಜನೆ ಮಾಡುವ ಸ್ಥಳಗಳ ಕುರಿತು ಸ್ಥಳೀಯವಾಗಿ ಸಾರ್ವಜನಿಕರಿಗೆ ವ್ಯಾಪಕ ಪ್ರಚಾರ ನೀಡುತ್ತೇವೆ,  ಪರಿಸರಕ್ಕೆ ಹಾನಿಯುಂಟು ಮಾಡುವ ವಿಗ್ರಹಗಳನ್ನು ಜಲಮೂಲಗಳಲ್ಲಿ ವಿಸರ್ಜನೆಗೆ ಅವಕಾಶ ನೀಡುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಪರಿಸರ ಅಭಿಯಂತರ ಜಾಫರ್,  ರೆವಿನ್ಯೂ ಇನ್ಸ್‍ಪೆಕ್ಟರ್ ಸಿ.ಮೋಕ್ಷದಾಯಿನಿ, ಯೋಗೇಂದ್ರ, ಆರೋಗ್ಯ ನಿರೀಕ್ಷಕರಾದ ಭಾರತಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಪ್ರಕಾಶ್, ಉಪ ಪರಿಸರ ಅಧಿಕಾರಿಗಳಾದ ರಾಜೇಶ್, ವನ್ಯಜೀವಿ ಮತ್ತು ಪರಿಸರ ಸಂರಕ್ಷಣಾ ವೇದಿಕೆ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್  ಇದ್ದರು.

ಫೋಟೋ ವಿವರ: ಚಿತ್ರದುರ್ಗ ನಗರದ ವಿವಿಧೆಡೆ ಚಿತ್ರದುರ್ಗ ನಗರಸಭೆ ಪೌರಾಯುಕ್ತರಾದ ಎಂ.ರೇಣುಕಾ ಅವರ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿ ಪರಸರದ ಮಣ್ಣಿನ ಗಣೇಶ ಮಾಡಿ, ಪಿಒಪಿ ಬಳಸಬೇಡಿ ಎಂದು ಜಾಗೃತಿ ಮೂಡಿಸುವ ಕೆಲಸ ಮಾಡಿದರು.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement