ಚಿತ್ರದುರ್ಗ: ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು “ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ.ಟಿ-ಪಿಹೆಚ್.ಡಿ.ಶಿಷ್ಯ ವೇತನ” ಎಂಬ ಕಾರ್ಯಕ್ರಮವನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಮುಖಾಂತರ ಅನುಷ್ಠಾನಗೊಳಿಸುತ್ತಿದೆ.
2023-24ಮೇ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆ, ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್‍ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆ ದಿನ.
ಹೆಚ್ಚಿನ ವಿವರಗಳಿಗಾಗಿ ಹಾಗೂ ಅರ್ಜಿ ಸಲ್ಲಿಸಲು http://ksteps.karnataka.gov.in ವೆಬ್‍ಸೈಟ್ ಸಂಪರ್ಕಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.