ಚಿತ್ರದುರ್ಗ: ಚಿತ್ರದುರ್ಗ ನಗರದ ಜೆಸಿಆರ್ ನಿವಾಸಿ, ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಪಿ.ನಯನ ಅವರಿಗೆ ಬೀದರ್‍ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಪಿಹೆಚ್‍ಡಿ ಪದವಿ ನೀಡಿದೆ.
ವಿಶ್ವವಿದ್ಯಾಲಯ ಅಂಗಸಂಸ್ಥೆಯಾದ ಮಂಗಳೂರಿನ ಮೀನುಗಾರಿಕೆ ಮಹಾವಿದ್ಯಾಲಯದ ಮೀನುಗಾರಿಕಾ ಸಂಪನ್ಮೂಲ ಮತ್ತು ನಿರ್ವಹಣೆ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ.ಹೆಚ್.ಎನ್.ಆಂಜನೇಯಪ್ಪ ಅವರ ಮಾರ್ಗದರ್ಶನದಲ್ಲಿ “ಕರ್ನಾಟಕ ಕರಾವಳಿಯಲ್ಲಿ ಸ್ಕೋಲಿಯೊಡಾನ್ ಲ್ಯಾಟಕಾಡಸ್ ಮೀನಿನ ಬಯಾಲಜಿ, ಪಾಪೂಲೇಶನ್ ಡೈನಾಮಿಕ್ಸ್ ಮತ್ತು ಮೀನುಗಾರಿಕೆ ಬಗ್ಗೆ ಅಧ್ಯಯನ” ಮಹಾಪ್ರಬಂಧಕ್ಕೆ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಪಿಹೆಚ್‍ಡಿ ಪದವಿ ನೀಡಿದೆ.
ಪಿ.ನಯನ ಅವರು ಮೀನುಗಾರಿಕೆ ಇಲಾಖೆ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ಪಾಪಣ್ಣ ಹಾಗೂ ಸುಮನಾ ಇವರ ಪುತ್ರಿ.
ಫೋಟೋ ವಿವರ: ಬೀದರ್‍ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ಮೀನುಗಾರಿಕಾ ಸಂಪನ್ಮೂಲ ಮತ್ತು ನಿರ್ವಹಣೆ ವಿಷಯದಲ್ಲಿ ಪಿ.ನಯನ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪಿಹೆಚ್‍ಡಿ ಪದವಿ ಪ್ರಧಾನ ಮಾಡಿದರು.