ಶ್ರೀನಗರ : 2019ರಲ್ಲಿ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ಹೃದಯಾಘಾತದಿಂದಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತ ಆರೋಪಿಯನ್ನು ಕಾಕಪೋರಾದ ಹಾಜಿಬಲ್ ಗ್ರಾಮದ ಬಿಲಾಲ್ ಅಹ್ಮದ್ ಕುಚೇ ಎಂದು ಗುರುತಿಸಲಾಗಿದೆ.
ಆರೋಪಿ ಸೆ.17 ರಂದು ಕಿಶ್ತ್ವಾರ್ ಜಿಲ್ಲಾ ಕಾರಾಗೃಹದಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆತ ಸೋಮವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
2020ರ ಆ.25 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎಸ್‌ಐಎ) ಕುಚೇ ಮತ್ತು ಪ್ರಕರಣದ ಇತರ 18 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತ್ತು. ಪ್ರಕರಣದಲ್ಲಿ ಬಂಧಿಸಲಾದ 7 ಆರೋಪಿಗಳಲ್ಲಿ ಈತನೂ ಒಬ್ಬನಾಗಿದ್ದ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ