ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ವೈರಲ್ ಆರೋಪ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಲಿಖಿತ್ ಗೌಡ ಹಾಗೂ ಚೇತನ್ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಾಸನದ ಒಂದನೇ ಅಧಿಕ ಹಿರಿಯ ಸಿವಿಲ್ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.
ಮೇ 12ರಂದು ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಲಿಖಿತ್ ಹಾಗೂ ಚೇತನ್‌ರನ್ನು ಎಸ್‌ಐಟಿ ಪೊಲೀಸರು ಪೆನ್‌ಡ್ರೈವ್ ಇಟ್ಟುಕೊಂಡಿದ್ದ ಆರೋಪದಲ್ಲಿವಶಕ್ಕೆ ಪಡೆದಿದ್ದರು. ಪ್ರಸ್ತುತ ಅವರಿಬ್ಬರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ನಿನ್ನೆ ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದೆ.