ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಏಳು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಅವರ ಮೃತದೇಹಗಳು ಹಾಗೂ ಅಪಾರ ಪ್ರಮಾಣದ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಏಪ್ರಿಲ್ 16ರಂದು ಕಂಕೇರ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು 29 ಮಾವೋವಾದಿಗಳನ್ನು ಹತ್ಯೆ ಮಾಡಿದ ನಂತರ ಇದು ನಕ್ಸಲರ ವಿರುದ್ಧದ ಅತಿದೊಡ್ಡ ಎನ್ಕೌಂಟರ್ ಕಾರ್ಯಾಚರಣೆಯಾಗಿದೆ.
ಕಾರ್ಯಚರಣೆ ಮುಂದುವರಿದಿದೆ. ಬಸ್ತಾರ್ ಪ್ರದೇಶದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ನಕ್ಸಲರ ಶಿಬಿರವನ್ನು ಭೇದಿಸಿ ಸ್ಫೋ ಟಕಗಳು ಮತ್ತು ಇತರ ಸಾಮಗ್ರಿಗಳ ಬೃಹತ್ ಸಂಗ್ರಹವನ್ನು ವಶಪಡಿಸಿಕೊಂಡಿದ್ದರು.