ಬೆಂಗಳೂರು: ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಗ್ಯಾಂಗ್ ಪೊಲೀಸ್ ಬಂಧನದಲ್ಲಿದ್ದು ಇಂದಿಗೆ ಗ್ಯಾಂಗ್‌ನ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯವಾಗಲಿದೆ. ಹೀಗಾಗಿ ಅವರೆಲ್ಲರೂ ಇಂದು ಪರಪ್ಪನ ಜೈಲಿಗೆ ವರ್ಗಾವಣೆಯಾಗುವ ಸಾಧ್ಯತೆ ಇದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಸ್ಟಡಿ ಅಂತ್ಯ ಹಿನ್ನಲೆಯಲ್ಲಿ ನಟ ದರ್ಶನ್ ಗ್ಯಾಂಗ್‌ನ ಸದಸ್ಯರನ್ನು ಪೊಲೀಸರು ಗುರುವಾರ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಈ ಕೊಲೆ ಪ್ರಕರಣದ ತನಿಖೆ ಸಲುವಾಗಿ ಎರಡು ಬಾರಿ ವಶಕ್ಕೆ ಪಡೆದಿರುವ ಕಾರಣ ಮತ್ತೆ ಆರೋಪಿಗಳನ್ನು ಸುಪರ್ದಿಗೆ ನೀಡುವಂತೆ ನ್ಯಾಯಾಲಯಕ್ಕೆ ಪೊಲೀಸರು ಮನವಿ ಸಲ್ಲಿಸುವ ಸಾಧ್ಯತೆಗಳು ಕಡಿಮೆ ಎನ್ನಲಾಗಿದೆ.
ಹತ್ತು ದಿನಗಳು ಕಸ್ಟಡಿಗೆ ಪಡೆದು ಸುದೀರ್ಘ ವಿಚಾರಣೆಗೊಳಪಡಿಸಿದ್ದಾರೆ. ಪೊಲೀಸ್ ಕಸ್ಟಡಿ ಗುರುವಾರ ಅಂತ್ಯವಾಗಲಿದ್ದು, ನಟ ದರ್ಶನ್ ಸೇರಿದಂತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಲಿದ್ದಾರೆ.
 
				 
         
         
         
															 
                     
                     
                     
                     
                    


































 
    
    
        