ದಾವಣಗೆರೆ; ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ನಾಗರಿಕ ಸೇವಾ ಪೊಲೀಸ್ ಕಾನ್‍ಸ್ಟೇಬಲ್ (ಪುರುಷ ಮತ್ತು ಮಹಿಳಾ) & (ತೃತೀಯ ಲಿಂಗ ಪುರುಷ, ಮತ್ತು ಮಹಿಳಾ) ಹಾಗೂ ಸೇವಾನಿರತ ಮತ್ತು ಬ್ಯಾಕ್‍ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಫೆ.25 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ನಡೆಸಲಾಗುವುದು.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪುರುಷ ಮತ್ತು ತೃತೀಯ ಲಿಂಗ ಪುರುಷ, ಮತ್ತು ಮಹಿಳೆ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸಬಾರದು, ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸಬಾರದು, ಪರೀಕ್ಷಾ ಕೇಂದ್ರದೊಳಗೆ ಹೂಗಳನ್ನು ನಿμÉೀಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು, ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದನ್ನು ನಿμÉೀಧಿಸಲಾಗಿದೆ, ಅಭ್ಯರ್ಥಿಗಳು ಈ ವಸ್ತ್ರ ಸಂಹಿತೆಯನ್ನು ಪಾಲಿಸಬೇಕೆಂದು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದ್ದಾರೆ.