‘ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ’- ಸಿ.ಎಂ ಘೋಷಣೆ

ಬೆಂಗಳೂರು: ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದರು.ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದವಾಗಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಘೋಷಿಸಿದರು.

ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಜನರ ಪ್ರಾಣ, ಮಾನ ಕಾಪಾಡುವ ಹೊತ್ತಲ್ಲಿ ಇವರೆಲ್ಲಾ ಹುತಾತ್ಮರಾಗಿದ್ದಾರೆ ಎಂದರು. ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು ಎಂದರು.ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನಬದ್ದವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೊಲೀಸರು.

Advertisement

 

ಇವರ ಜೊತೆಗೆ ಸರ್ಕಾರ ಇರುತ್ತದೆ ಎಂದರು.ಅಪರಾಧ ತಡೆಯಲು 6000 ಸಾವಿರ ಸಿಸಿ ಕ್ಯಾಮರಾಗಳು, 260 ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು ಕಾನೂನು ಸುವ್ಯವಸ್ಥೆಗೂ ದೇಶದ ಜನರ ಜಿಡಿಪಿಗೂ ನೇರಾ ನೇರ ಸಂಬಂಧ ಇರುವುದನ್ನು ಮುಖ್ಯಮಂತ್ರಿಗಳು ವಿವರಿಸಿದರು.ಕಾನೂನು ಸುವ್ಯವಸ್ಥೆ ಸಮರ್ಪಕವಾಗಿದ್ದರೆ ಮಾತ್ರ ಬಂಡವಾಳ ಹೂಡಿಕೆ ಹೆಚ್ಚಾಗುತ್ತದೆ. ಹೂಡಿಕೆಯಿಂದ ಉದ್ಯೋಗ ಸೃಷ್ಟಿ ಹೆಚ್ಚಾಗುತ್ತದೆ. ಉದ್ಯೋಗ ಸೃಷ್ಟಿಯಿಂದ ಆರ್ಥಿಕತೆಯ ವೇಗ ಹೆಚ್ಚುತ್ತದೆ. ಆರ್ಥಿಕತೆಗೆ ವೇಗ ಬಂದರೆ ಅಭಿವೃದ್ಧಿ ಹೆಚ್ಚುತ್ತದೆ. ಅಭಿವೃದ್ಧಿ ಹೆಚ್ಚಾದರೆ ಜನರ ಜಿಡಿಪಿ, ತಲಾ ಆದಾಯವೂ ಹೆಚ್ಚುತ್ತದೆ ಎಂದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement