ಬೆಂಗಳೂರು: ಪೋಕ್ಸೊ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಸಿಐಡಿ ವಿಚಾರಣೆಗೆ ಹಾಜರಾಗಲಿದ್ದಾರೆ.
ಬರೋಬ್ಬರಿ 3 ತಿಂಗಳ ನಂತರ ವಿಚಾರಣೆ ಎದುರಿಸಲು ಬಿಎಸ್‌ವೈ ಸಿಐಡಿ ಕಚೇರಿಗೆ ತನಿಖೆಗೆ ಹಾಜರಾಗುತ್ತಿದ್ದಾರೆ. ಮಾರ್ಚ್ 14 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿತ್ತು. ಹೆಚ್ಚಿನ ತನಿಖೆ ನಡೆಸುವಂತೆ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿ ಆದೇಶಿಸಿತ್ತು. ಇದಾದ ನಂತರ ಸಿಐಡಿ ಬಿಎಸ್‌ವೈ ಅವರ ವಾಯ್ಸ್ ಸ್ಯಾಂಪಲ್ ಪಡೆದಿದ್ದಾರೆ.
ಪ್ರಕರಣದ ಹೆಚ್ಚಿನ ವಿಚಾರಣೆಗೆ ಯಡಿಯೂರಪ್ಪ ಅವರಿಗೆ ಸಿಐಡಿ ನೋಟಿಸ್ ಜಾರಿಗೊಳಿಸಿತ್ತು. ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೇಳಿದ್ದರಿಂದ ಸಿಐಡಿ ವಾರೆಂಟ್ ಜಾರಿಗೊಳಿಸಿ ಬಂಧಿಸಲು ಮುಂದಾಗಿತ್ತು. ಈ ವೇಳೆ ಹೈಕೋರ್ಟ್ ಯಡಿಯೂರಪ್ಪರನ್ನು ಬಂಧಿಸದಂತೆ ತಡೆ ನೀಡಿತ್ತು. ಇಂದು ವಿಚಾರಣೆಗೆ ಹಾಜರಾಗಲು ಸೂಚಿಸಿದ ಹಿನ್ನೆಲೆ ಸಿಐಡಿ ಮುಂದೆ ಬಿಎಸ್‌ವೈ ಇಂದು ತನಿಖೆಗೆ ಹಾಜರಾಗಲಿದ್ದಾರೆ.