ಬೆಂಗಳೂರು : ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣದ ಎಲ್ಲರಿಗೂ ತಿಳಿದ ಸಂಗತಿ ಹಾಗೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದರ ಮಧ್ಯೆ ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ರಾಜ್ಯ ಕಾನೂನು ಇಲಾಖೆ, ಈ ಪ್ರಕರಣದಲ್ಲಿ ಎಸ್‌ಐಟಿ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ಸುಪ್ರೀಂ ಕೋರ್ಟ್ ವಕೀಲೆ ಜೈನಾ ಕೊಠಾರಿ ಮತ್ತು ವಕೀಲ ಅಶೋಕ್ ನಾಯಕ್ ಅವರನ್ನು ಹೆಚ್ಚುವರಿ ವಿಶೇಷ ಅಭಿಯೋಜಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಈ ಇಬ್ಬರನ್ನು ನೇಮಕ ಮಾಡಲಾಗಿದೆ ಎಂದು ಕಾನೂನು ಇಲಾಖೆ ತನ್ನ ಆದೇಶ ಪತ್ರದಲ್ಲಿ ತಿಳಿಸಿದೆ.