ಹಾಸನ: ನಾನು ಬದುಕಿರುವವರೆಗೆ ಜಿಲ್ಲೆಯ ಜನರ ಸಹಕಾರಕ್ಕೆ ಋಣಿಯಾಗಿರುತ್ತೇನೆ. ನಮ್ಮ ಕಾರ್ಯಕರ್ತರ ಸಂಕಷ್ಟಕ್ಕೆ ಜೊತೆಯಾಗಿ ನಿಲ್ಲುತ್ತೇನೆ ಎಂದು ಶಾಸಕ ಎಚ್‌ಡಿ.ರೇವಣ್ಣ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ನಾನು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ. ನ್ಯಾಯಾಲಯದ ಬಗ್ಗೆ ನನಗೆ ಗೌರವವಿದೆ. ನಾನು ದೇವರ ಮೇಲೆ ನಂಬಿಕೆ ಇಟ್ಟಿರುವವ ಎಂದು ಹೇಳಿದರು.
ಹೊಳೆನರಸೀ ಪುರ ತಾಲ್ಲೂಕಿನ ಜನರು, ಜಿಲ್ಲೆಯ ಜನರ ಜೊತೆ ನಾನು ಬದುಕಿರುವವರೆಗೂ ಇರುತ್ತೇನೆ. ನಿಮ್ಮ ಜೊತೆ ನಾನು, ದೇ ವೇ ಗೌಡರು, ಕುಮಾರಸ್ವಾಮಿ ಹಾಗೂ
ನಮ್ಮ ಕುಟುಂಬ ಇರುತ್ತದೆ. ಯಾರೂ ಧೃತಿಗೆಡಬೇಕಾದ ಪ್ರಮೇಯವಿಲ್ಲ ಎಂದರು.
ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಇರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಅವರು, ‘ಅದು ನನಗೆ ಗೊತ್ತಿಲ್ಲ. ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಹೇಳಿದರು.

































