ಬೆಂಗಳೂರು: ಲೈಂಗಿನ ದೌರ್ಜನ್ಯ, ಅಶ್ಲೀಲ ವೀಡಿಯೋಗಳ ಪೆನ್ಡ್ರೈವ್ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶಿಸಿದೆ. ಪೊಲೀಸ್ ಕಸ್ಟಡಿಯಲ್ಲಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಜುಲೈ 8ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.