ಬೆಂಗಳೂರು: ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲವಾಗಿದೆ. ಹಾಗಾಗಿ ಆತನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಕೊಡುವುದಾಗಿ ಪೋಸ್ಟರ್ ಅಂಟಿಸಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಜ್ವಲ್ ಹುಡುಕುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲವಾಗಿದೆ. ಹಾಗಾಗಿ ಪ್ರಕರಣದ ಎರಡನೆಯ ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ರೂಪಾಯಿ ನೀಡುವುದಾಗಿ ಪ್ರಕಟಿಸಿದೆ. ಬೆಂಗಳೂರಿನ ಶಿವಾನಂದ ಸರ್ಕಲ್ನಲ್ಲಿ ಜನತಾ ಪಕ್ಷದ ನಾಗೇಶ್ ಎಂಬಾತ ಪೋಸ್ಟರ್ ಅಂಟಿಸಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೂ ಆತನ ಜೊತೆಗೆ ಪೋಸ್ಟರ್ ಅಂಟಿಸಿದ ಇತರೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪವೆದಿದ್ದಾರೆ.
ಸದ್ಯ ಪೋಸ್ಟರ್ ಅಂಟಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಬಹುಮಾನ ಘೋಷಿಸಿ ಅಂಟಿಸಿದ್ದ ಪೋಸ್ಟರ್ ಅನ್ನು ಪೊಲೀಸರು ತೆರವುಗೊಳಿಸಿದ್ದಾರೆ.