ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದೆ. ಈ ತಂಡದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಸಿಐಡಿಯಿಂದ ವಿಶೇಷ ತನಿಖಾ ತಂಡಕ್ಕೆ 18 ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನೇಮಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪರಿಣಿತರನ್ನು ಒಳಗೊಂಡು ತಂಡ ರಚಿಸಲಾಗಿದೆ.
ಇಂದಿನಿಂದಲೇ ಕಾರ್ಯಾಚರಣೆ ಆರಂಭವಾಗುವ ಸಾಧ್ಯತೆ ಇದೆ.