ಬೆಂಗಳೂರು: ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಮಾಜಿ ಸಂಸದ, ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಸದ್ಯ ಜೈಲಿನಲ್ಲಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ‘ವಿಡಿಯೋಗಳು ಅಸಲಿ’ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆಯಲ್ಲಿ ಸಾಬೀತಾಗಿದೆ.
ಈ ಎಲ್ಲ ವಿಡಿಯೋಗಳನ್ನು ತನಿಖಾಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದರು. ಸದ್ಯ ಎಫ್ಎಸ್ಎಲ್ ವರದಿಯು ತನಿಖಾಧಿಕಾರಿಗಳ ಕೈ ಸೇರಿದೆ. ‘ಈ ವಿಡಿಯೋಗಳು ನೈಜವಾಗಿವೆ. ಯಾವುದೇ ರೀತಿಯ ತಿರುಚುವಿಕೆ ನಡೆದಿಲ್ಲ ಎಂದು ಎಫ್ಎಸ್ಎಲ್ ವರದಿಯಲ್ಲಿ ಹೇಳಲಾಗಿದೆ.