ನವದೆಹಲಿ: ಅಯೋಧ್ಯೆಯಲ್ಲಿ ತಲೆಎತ್ತಿ ನಿಂತಿರುವ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಜ, 22 ರಂದು ಸಂಪನ್ನಗೊಳ್ಳಲಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಗಲಿದೆ. ಈ ವಿಚಾರವಾಗಿ ಕೆಲವು ದಿನಗಳಿಂದ ಹಲವಾರು ವಿವಾದಾತ್ಮಕ ಹೇಳಿಕೆಗಳು ವ್ಯಕ್ತವಾಗುತಿದ್ದು, ಆದರೆ ಈ ಮೋಸದ ಜಾಲಕ್ಕೆ ಸಿಲುಕಬೇಡಿ ಎಂದು ಪ್ರಧಾನಿ ಮೋದಿ ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ.
ಸಹೋದ್ಯೋಗಿಗಳಿಗೆ ವಿಶೇಷ ಸಂದೇಶ ನೀಡಿದ ಪ್ರಧಾನಿ ಮೋದಿ ಅವರು, ರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಿದ್ದತೆಗಳು ಭರದಿಂದ ಸಾಗುತ್ತಿದ್ದು, ಆದರೆ ಇದರ ನಡುವೆ ದೇಶದಲ್ಲಿ ಯಾರು ಯಾವುದೇ ವಿವಾದಾತ್ಮಕ ಹೇಳಿಕೆಗಳು ನೀಡದಂತೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು ಸಹೋದ್ಯೋಗಿಗಳಿಗೆ ಮಾಹಿತಿ ನೀಡಿದ್ದಾರೆ.
ಇನ್ನು ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗುತ್ತಿದ್ದಂತೆ, ಈಗಗಾಲೇ ಕೋಮು ಘರ್ಷಣೆಗಳು ಭುಗಿಲೆದ್ದಿರುವ ಬಗ್ಗೆ ಹಲವಾರು ವಿರೋಧ ಪಕ್ಷದ ನಾಯಕರು ಕೂಡ ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ರಾಜ್ಯದ ಜನತೆಯನ್ನು ದಾರಿ ತಪ್ಪಿಸುವ ಈ ಹೇಳಿಕೆಗೆ ಯಾರು ಪ್ರತಿಕ್ರಿಯಿಸಿಬೇಡಿ ಎಂದು ತಿಳಿಸಿದ್ದಾರೆ.