ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ನಾನೂ ಆಕಾಂಕ್ಷಿ ಎಂದು ಶಾಸಕ, ಮಾಜಿ ಡಿಸಿಎಂ ಡಾ. ಅಶ್ವತ್ಥ ನಾರಾಯಣ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಕ್ತವಾದ ವ್ಯಕ್ತಿಯನ್ನು ವಿರೋಧ ಪಕ್ಷದ ನಾಯಕರನ್ನಾಗಿ ನಮ್ಮ ನಾಯಕರು ನೇಮಕ ಮಾಡುತ್ತಾರೆ. ವಿಧಾನ ಸಭೆಯಲ್ಲಿರೋ 66 ಜನ ಶಾಸಕರಿದ್ದಾರೆ.ಎಲ್ಲರೂ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದಾರೆ.ನಾನೂ ಕೂಡ ಆಕಾಂಕ್ಷಿಯಾಗಿದ್ದೇನೆ ಎಂದರು.
ಇನ್ನು ಜೆಡಿಎಸ್ ಜತೆ ಮೈತ್ರಿ ಆಗಿರಬಹುದು. ಅಂದ ಮಾತ್ರಕ್ಕೆ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ಕೊಡಬೇಕು ಅಂತಾ ಏನೂ ಇಲ್ಲ.ವಿಧಾನಸಭೆಯಲ್ಲಿ ಬಿಜೆಪಿ ಕಾನೂನಾತ್ಮಕವಾಗಿ ವಿರೋಧ ಪಕ್ಷ.ನಮ್ಮಲ್ಲೇ ಬೇಕಾದಷ್ಟು ನಾಯಕರಿದ್ದಾರೆ ಎಂದು ಹೇಳಿದ್ದಾರೆ.