ಕರ್ನಾಟಕ ಸರ್ಕಾರ ಸಿರಿಧಾನ್ಯ ಬಳಕೆ ಉತ್ತೇಜಿಸಲು, ಸಿರಿಧಾನ್ಯ ಬೆಳೆದ ರೈತರಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಪ್ರತಿ ಜಿಲ್ಲೆಯಲ್ಲಿ ಸಿರಿಧಾನ್ಯ ಮೇಳವನ್ನು ಆಯೋಜನೆ ಮಾಡಲಿದೆ.
ಈಗಾಗಲೇ ರಾಜ್ಯದಲ್ಲಿ ಸಿರಿಧಾನ್ಯಗಳ ಬಳಕೆ ಹೆಚ್ಚಾಗುತ್ತಿದೆ. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಫುಡ್‌ಪಾರ್ಕ್‌ಗಳ ಪುನಶ್ಚೇತನ ಹಾಗೂ ಸಿರಿಧಾನ್ಯಗಳಿಗೆ
ಸಂಬಂಧಿಸಿದಂತೆ ಕಾರ್ಯಾಚರಣೆಯಲ್ಲಿರುವ ಸ್ಟಾರ್ಟ್ ಅಪ್ ಉದ್ಯಮಗಳಿಗೆ ಇಲಾಖೆ ಸಹಭಾಗಿತ್ವದಲ್ಲಿ ಇದನ್ನು ನಡೆಸುವುದಾಗಿ ತಿಳಿಸಿದ್ದಾರೆ.