ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜುಗಳಿಗೆ 2024-25ನೇ ಸಾಲಿಗೆ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ (ಪಿಸಿಎಂಬಿ/ಪಿಸಿಎಂಸಿ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿರುವ ಶಾಲೆಗಳಲ್ಲಿ ಓದಿರುವ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಮೇ 13 ರಿಂದ 23 ರವರೆಗೆ ಅರ್ಜಿ ಸ್ವೀಕಾರ ನಡೆಯಲಿದೆ.
ವಸತಿ ಕಾಲೇಜುಗಳ ವಿಳಾಸ: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿಯ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜು ಹಾಗೂ ಬೊಮ್ಮನಕಟ್ಟೆ ಉನ್ನತಿಕರಿಸಿದ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ಕಾಲೇಜು ಇಲ್ಲಿ ಪ್ರಥಮ ಪಿಯುಸಿ ವಿಜ್ಞಾನ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ತಮ್ಮ ಹತ್ತಿರದ ವಸತಿ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಅರ್ಜಿಗಳ ಲಭ್ಯತೆ ಹಾಗೂ ಅರ್ಜಿ ಸ್ವೀಕಾರ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು: ಎಸ್‍ಎಸ್‍ಎಲ್‍ಸಿ ಪ್ರವೇಶ ಪತ್ರದ ಜೆರಾಕ್ಸ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್ , ಇತ್ತೀಚಿನ ಎರಡು ಭಾವಚಿತ್ರಗಳು, ದೃಢೀಕೃತ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ ಹಾಗೂ ಇತರೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಕಾಲೇಜುಗಳಲ್ಲಿರುವ ಸೌಲಭ್ಯಗಳು: ಊಚಿತ ಊಟ, ವಸತಿ, ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಅನುಭವಿ ಉಪನ್ಯಾಸಕರಿಂದ ಗುಣಮಟ್ಟದ ಶಿಕ್ಷಣ ದೊರೆಯಲಿದ್ದು, ಜಿಲ್ಲೆಯ ಎಲ್ಲಾ ಪೋಷಕರು ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಸತಿ ಶಾಲೆ, ಕಾಲೇಜು ಹಾಗೂ ಜಿಲ್ಲಾ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ತಿಳಿಸಿದ್ದಾರೆ.