ನವದೆಹಲಿ: ವಿಶೇಷ ಭದ್ರತಾ ಪಡೆಯ ( ಎಸ್ಪಿಜಿ )ನಿರ್ದೇಶಕ ಅರುಣ್ ಕುಮಾರ್ ಸಿನ್ಹಾ ಅವರು ಬುಧವಾರ ಮುಂಜಾನೆ ಗುರುಗ್ರಾಮ್ನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
61 ವರ್ಷದ ಸಿನ್ಹಾ ಅವರು ಕಳೆದ ಕೆಲ ತಿಂಗಳಿನಿಂದ ಕಿಡ್ನಿಸಂಬಂಧಿತ ಕಾಯಿಲೆಯಿಂದ ಬಳುತ್ತಿದ್ದಗುರುಗ್ರಾಮ್ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಸಿನ್ಹಾ ಅವರು 1987ರ ಬ್ಯಾಚ್ ಕೇರಳ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದರು. ಆ ಬಳಿಕ 2016 ರಿಂದ ಎಸ್ಪಿಜಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಪ್ರಧಾನಿ ಮತ್ತು ಮಾಜಿ ಪ್ರಧಾನಿಗಳ ಭದ್ರತೆಯ ಉಸ್ತುವಾರಿ ವಹಿಸಿದ್ದರು. ಇತ್ತೀಚೆಗಷ್ಟೇ ಅವರ ಸೇವೆ ವಿಸ್ತರಣೆ ಮಾಡಲಾಗಿತ್ತು.
ಸಿನ್ಹಾ ಅವರು ಈ ಹಿಂದೆ ತಿರುವನಂತಪುರಂನಲ್ಲಿ ಡಿಸಿಪಿ ಕಮಿಷನರ್, ರೇಂಜ್ ಐಜಿ, ಇಂಟೆಲಿಜೆನ್ಸ್ ಐಜಿ ಮತ್ತು ಅಡ್ಮಿನಿಸ್ಟ್ರೇಷನ್ ಐಜಿ ಆಗಿ ಸೇವೆ ಸಲ್ಲಿಸಿದ್ದಾರೆ.