ನವದೆಹಲಿ: 19ನೇ ಏಷ್ಯನ್ ಗೇಮ್ಸ್ನ ಪುರುಷರ ಕ್ರಿಕೆಟ್ ಈವೆಂಟ್ನಲ್ಲಿ ಟೀಂ ಇಂಡಿಯಾವನ್ನು ಗೆಲುವಿನತ್ತ ಮುನ್ನಡೆಸಿದ ಋತುರಾಜ್ ಗಾಯಕ್ವಾಡ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಹಿ ಮಾಡಿದ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಏಷ್ಯನ್ ಗೇಮ್ಸ್ನಲ್ಲಿ ಭಾಗವಹಿಸಿದ ಭಾರತೀಯ ಆಟಗಾರರೊಂದಿಗೆ ಪ್ರಧಾನಿ ಮೋದಿ ಅವರು ಮಂಗಳವಾರ ದೆಹಲಿಯಲ್ಲಿ ಸಂವಾದ ನಡೆಸಿದರು. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡ ಟೀಂ ಇಂಡಿಯಾ ಚಿನ್ನದ ಪದಕ ವಿಜೇತರನ್ನು ಭೇಟಿ ಮಾಡಿದರು. ಈ ವೇಳೆ ಋತುರಾಜ್ ಗಾಯಕ್ವಾಡ್ ಪ್ರಧಾನಿ ಮೋದಿ ಅವರಿಗೆ ಬ್ಯಾಟ್ ಗಿಫ್ಟ್ ಕೊಟ್ಟಿದ್ದಾರೆ.