ಚೆನ್ನೈ :ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿಯ ಮರಪಾಲಂನಲ್ಲಿ ಪ್ರಪಾತಕ್ಕೆ ಪ್ರವಾಸಿ ಬಸ್ ಬಿದ್ದು 8 ಜನ ಮೃತಪಟ್ಟಿದ್ದಾರೆ. 35 ಜನರಿಗೆ ಗಾಯಗಳಾಗಿದ್ದು, ಕೂನೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರವಾಸಿ ಬಸ್ನಲ್ಲಿ ಒಟ್ಟು 55 ಜನ ಪ್ರಯಾಣಿಸುತ್ತಿದ್ದ ಮಾಹಿತಿ ದೊರೆತಿದೆ. ಮೃತರಿಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸೆಗೆ ತಲಾ 50 ಸಾವಿರ ರೂ. ನೆರವು ನೀಡುವುದಾಗಿ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.