ಬೆಂಗಳೂರು: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಸ್ವಚ್ಛತೆ ಹಾಗೂ ಪ್ರಶಾಂತತೆ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಮತ್ತೊಂದು ನಿರ್ಧಾರ ಕೈಗೊಂಡಿದೆ.
ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ಸಿಗರೇಟ್ ಸೇರಿದಂತೆ ಇತರೆ ತಂಬಾಕು ಉತ್ಪನ್ನಗಳ ಮಾರಾಟ ಮಾಡದಂತೆ ಹಾಗೂ ಧೂಮಪಾನ ನಿಷೇಧಿಸುವುದಾಗಿ ಹೇಳಿದೆ. ಅಲ್ಲದೆ, ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ ಹೆಚ್ಚಿನ ಮಹಿಳೆಯರು ಆಗಮಿಸುತ್ತಿರುವುದರಿಂದ ಹಾಲುಣಿಸುವ ತಾಯಂದಿರಿಗಾಗಿ ಪ್ರತ್ಯೇಕ ಕೊಠಡಿ ವ್ಯವಸ್ಥೆಯೂ ಸರ್ಕಾರ ಮಾಡಲಿದೆ.