ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ಪಾಲಿಸಿ- ಮಾಸ್ಟರ್ ಪ್ಲಾನ್ ಸಿದ್ದಪಡಿಸಿಕೊಂಡು ಬನ್ನಿ-ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ.

ಬೆಂಗಳೂರು: ರಾಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯ. 320 ಕಿಮಿ ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಎರಡನೇ ದಿನದ ಸಭೆ ನಡೆಸಲಾಯಿತು.

ಈ ವೇಳೆ ಮಾತನಾಡಿದವರು, ಪ್ರವಾಸೋದ್ಯಮದಿಂದ  ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು ಎಂದು ಹೇಳಿದರು.ಅನೇಕ ರಾಜ್ಯಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ನೆರೆಯ ಕೇರಳದಷ್ಟು ಕೂಡಾ ಪ್ರವಾಸೋದ್ಯಮ ಅಭಿವೃದ್ಧಿ ನಮಗೆ ಸಾಧ್ಯವಾಗಿಲ್ಲ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕಾಶೆ ಸಿದ್ಧಪಡಿಸಬೇಕು. ಪ್ರವಾಸೋದ್ಯಮ ಮೂಲಸೌಲಭ್ಯಗಳು ಅತ್ಯಂತ ಕಡಿಮೆಯಿದೆ. ಮಧುಗಿರಿಯಲ್ಲಿರುವ ಏಕಶಿಲಾ ಬೆಟ್ಟ ಹಿಂದಿನ ಬಾರಿ ಸರ್ಕಾರ ಇದ್ದಾಗ ಅಭಿವೃದ್ಧಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರೂ, ಇದುವರೆಗೆ ಯಾವುದೇ ಅಭಿವೃದ್ಧಿಯಾಗಿಲ್ಲ.ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಿದರೆ ಮಾತ್ರ ಬಂಡವಾಳ ಹೂಡಿಕೆದಾರರು ಮುಂದೆ ಬರುತ್ತಾರೆ ಎಂದರು.

Advertisement

ಜಿಲ್ಲಾಧಿಕಾರಿಗಳು ಪ್ರವಾಸಿ ತಾಣಗಳ ಅಭಿವೃದ್ಧಿ ಸಾಧ್ಯತೆಗಳನ್ನು ಗುರುತಿಸಬೇಕು. ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲ ಸರ್ಕಾರದ ವತಿಯಿಂದಲೂ ಹೆಜ್ಜೆ ಇರಿಸಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಎಲ್ಲಾ ಅಂಶಗಳನ್ನು ಸೇರಿಸಲಾಗುವುದು. ಇದಕ್ಕೆ ಪೂರಕವಾಗಿ ಅನುದಾನವನ್ನು ಒದಗಿಸಲಾಗುವುದು ಎಂದರುಕರಾವಳಿಯಲ್ಲಿ ಸಿಆರ್‌ಝೆಡ್‌ ಕಾಯ್ದೆಯಿಂದಾಗಿ ಅಭಿವೃದ್ಧಿಗೆ ಕೆಲವು ತೊಡಕುಗಳಿದ್ದು, ಇದನ್ನು ಬಗೆಹರಿಸಲು ಪ್ರಯತ್ನಿಸಬೇಕು ಎಂದರು. ಮೂರು ತಿಂಗಳ ಒಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸಬೇಕು. ಪ್ರವಾಸಿಕ ತಾಣಗಳನ್ನು ಹಂತ ಹಂತವಾಗಿ ಪುನರುಜ್ಜೀವನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕರಾವಳಿ ಪ್ರವಾಸೋದ್ಯಮಕ್ಕೆ ಆದ್ಯತೆ:
ಕರಾವಳಿಯಲ್ಲಿ ಮೆಡಿಕಲ್‌ ಕಾಲೇಜುಗಳು, ಬಂದರುಗಳು, ದೇವಾಲಯಗಳು ಸೇರಿದಂತೆ ಹಲವು ಪ್ರಮುಖ ಸ್ಥಳಗಳು ಇವೆ. ಆದರೆ ಒಂದೇ ಒಂದು ಪಂಚತಾರಾ ಹೊಟೇಲ್‌ ಇಲ್ಲ. ಸಂಜೆಯಾಗುತ್ತಿದ್ದಂತೆಯೇ ಇಡೀ ಮಂಗಳೂರು ಮುಚ್ಚಿಕೊಳ್ಳುತ್ತದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಕ್ಕೆ ಪ್ರತ್ಯೇಕ ಯೋಜನೆಯನ್ನು ರೂಪಿಸಬೇಕಿದೆ. ಕರಾವಳಿಯ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಕಂಡುಕೊಳ್ಳುವ ಅಗತ್ಯವಿದೆ. ಇದರಿಂದ ತೆರಿಗೆ ಸಂಗ್ರಹ ಹಾಗೂ ಸ್ಥಳೀಯರಿಗೆ ಉದ್ಯೋಗವಕಾಶ ಸೃಷ್ಠಿಸಲು ಸಾಧ್ಯವಿದೆ. ಕರಾವಳಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮುಂಬೈ, ಗಲ್ಫ್‌ ದೇಶಗಳಿಗೆ ಉದ್ಯೋಗ ಅರಸಿಕೊಂಡು ಹೋಗುವ ಪರಿಸ್ಥಿತಿ ಬದಲಾಗಬೇಕಿದೆ ಎಂದರು

ಇದಕ್ಕೆ ಧ್ವನಿಗೂಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಅತೀ ವಿಸ್ತಾರವಾದ ಕರಾವಳಿ ಪ್ರದೇಶವಿದೆ. ಕರಾವಳಿಯುದ್ಧಕ್ಕೂ ನಾವು ಪ್ರವಾಸೋದ್ಯಮ ಬೆಳೆಸುವ, ಅಭಿವೃದ್ಧಿಪಡಿಸುವ ಅವಕಾಶಗಳು ಹೇರಳವಾಗಿವೆ ಎಂದರು.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement