ದಾವಣಗೆರೆ; ಪ್ರಸಕ್ತ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಪರಿಶಿಷ್ಟ ವರ್ಗದ ಜನರ ಏಳಿಗೆಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಂದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆÀ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವ್ಯಕ್ತಿಗಳು ಸೆಪ್ಟೆಂಬರ್ 30 ರೊಳಗಾಗಿ ಅಗತ್ಯ ನಮೂನೆಯೊಂದಿಗೆ ಭರ್ತಿ ಮಾಡಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಕೊಠಡಿ ಸಂ. 45, ಜಿಲ್ಲಾಡಳಿತ ಭವನ, ಇಲ್ಲಿಗೆ ಸಲ್ಲಿಸಬೇಕು. ಅಕ್ಟೋಬರ್ 28 ರಂದು ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.


































