ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿನಿಯಮಗಳಲ್ಲಿನ ಅನ್ಯಾಯ ಸರಿಪಡಿಸುವ ಸಂಬಂಧ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆ ಈಡೇರಿಕೆಗೆ ತಜ್ಞರ ಸಮಿತಿ ರಚಿಸಲಾಗಿದೆ.
ತಜ್ಞರ ಸಮಿತಿಯನ್ನು ಸರ್ಕಾರ ರಚನೆ ಮಾಡಿದ್ದು, ಸೂಕ್ತ ಶಿಫಾರಸು ಹಾಗೂ ಅಭಿಪ್ರಾಯದೊಂದಿಗೆ ಸಮಗ್ರ ವರದಿ ಸಲ್ಲಿಸಲು ಆದೇಶಿಸಿದೆ.
2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016 ಕ್ಕಿಂತ ಮೊದಲು ನೇಮಕವಾದ ಶಿಕ್ಷಕ ವೃಂದಕ್ಕೆ ಪೂರ್ವಾನ್ವಯಗೊಳಿಸಬಾರದು. ಸೇವಾ ನಿರತ ಶಿಕ್ಷಕರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು. ಅಲ್ಲದೇ ಪದವಿ ಪೂರ್ಣಗೊಳಿಸಿದ ಶಿಕ್ಷಕರನ್ನು ಆರರಿಂದ ಎಂಟನೇ ತರಗತಿಗೆ ಸೇವಾ ನಿರತ ಪದವೀಧರ ಶಿಕ್ಷಕರೆಂದು ಒಂದು ಬಾರಿ ಪದನಾಮಗೊಳಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಹಲವು ಬಾರಿ ಪ್ರತಿಭಟನೆ ನಡೆಸಿ ಸಿಎಂಗೆ ಮನವಿ ಸಲ್ಲಿಸಿದ್ದರು.
ಸರ್ಕಾರದ ಈ ಕ್ರಮವನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸ್ವಾಗತಿಸಿದ್ದು, ಕಾಲಮಿತಿಯೊಳಗೆ ಸಮಿತಿಯು ಶಿಕ್ಷಕರ ಬೇಡಿಕೆಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಕೋರಿದೆ.
(ಸಾಂದರ್ಭಿಕ ಚಿತ್ರ)