ಕೋಲ್ಕತ್ತಾ: ಹಿಂಸಾಚಾರ, ಗಲಭೆ ಹಾಗೂ ಅನೇಕ ಮಂದಿಯ ಸಾವಿನ ನಡುವೆ ಮುಕ್ತಾಯಗೊಂಡ ಪಂಚಾಯತ್ ಚುನಾವಣೆಯ ಮತ ಎಣಿಕೆ ಬಿಗಿ ಭದ್ರತೆಯೊಂದಿಗೆ ಆರಂಭವಾಗಿದೆ.
ಮತ ಎಣಿಕೆ ಕೇಂದ್ರದ ಸುತ್ತ ಗಲಭೆಗಳು ನಡೆಯದಂತೆ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದ್ದು, ಒಟ್ಟು ಮೂರು ಹಂತದಲ್ಲಿ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ.
ಮೂಡಿಗೆರೆಯಲ್ಲಿ ಬಂಟ್ವಾಳದ ಸಾವದ್ ಹತ್ಯೆ ಪ್ರಕರಣ – ನಾಲ್ವರು ಆರೋಪಿಗಳ ಬಂಧನ
ಇನ್ನು ಬೆಳಿಗ್ಗೆ 8 ಗಂಟೆಯಿಂದ ಮತಎಣಿಕೆ ಕೇಂದ್ರದಲ್ಲಿ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು ಸಾಕಷ್ಟು ಭಿಗಿ ಭದ್ರತೆ ಒದಗಿಸಲಾಗಿದೆ ಅಲ್ಲದೆ ಯಾವುದೇ ಅಹಿತಕರ ಘಟನೆ ನಡೆದರೂ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸುವಂತೆಯೂ ಸೂಚಿಸಲಾಗಿದೆ.
ಹಲವೆಡೆ ಮತಪೆಟ್ಟಿಗೆಗಳನ್ನು ಲೂಟಿ ಮಾಡಿ, ಬೆಂಕಿ ಹಚ್ಚಿ ಕೆರೆಗೆ ಎಸೆದು ಹಿಂಸಾಚಾರ ನಡೆದಿತ್ತು.