ಚಿತ್ರದುರ್ಗ: 2023-24ನೇ ಸಾಲಿನ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದ ಉಳಿಕೆ ಅನುದಾನದಡಿ ಎಸ್ಸಿಪಿ ಮತ್ತು ಟಿಎಸ್ಪಿ ಫಲಾನುಭವಿಗಳಿಗೆ ಒಂದು ಮಿಶ್ರ ತಳಿ ಹಸು ಘಟಕ ವಿತರಿಸುವ ಕಾರ್ಯಕ್ರಮ ಸರ್ಕಾರದಿಂದ ಅನುಮೋದನೆಯಾಗಿದ್ದು, ಸರ್ಕಾರದ ಮಾರ್ಗಸೂಚಿಯನ್ವಯ ತಾಲ್ಲೂಕುವಾರು ಗುರಿ ನಿಗದಿಪಡಿಸಲಾಗಿದೆ. ಈ ಯೋಜನೆ ಅನುಷ್ಟಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಯಾ ತಾಲ್ಲೂಕಿನ ಪಶುಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿಗಳಿಗೆ ನವೆಂಬರ್ 25 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅನುಷ್ಟಾನಾಧಿಕಾರಿಗಳ ದೂರವಾಣಿ ಸಂಖ್ಯೆ ಚಿತ್ರದುರ್ಗ 9482943111, ಚಳ್ಳಕೆರೆ 9448816499, ಹೊಳಲ್ಕೆರೆ 8073900950, ಹೊಸದುರ್ಗ 9945298407, ಹಿರಿಯೂರು 9483451044, ಮೊಳಕಾಲ್ಮೂರು 9900964820 ಗೆ ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.