ಫೆ.27 ರಂದು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ: ಚುನಾವಣಾ ಆಯೋಗ

ನವದೆಹಲಿ: ಕರ್ನಾಟಕದ 4 ಸ್ಥಾನ ಸೇರಿ ’15 ರಾಜ್ಯಗಳ 56 ಸ್ಥಾನ’ಗಳಿಗೆ ಫೆ.27 ರಂದು ರಾಜ್ಯಸಭಾ ಚುನಾವಣೆ ನಡೆಸಲಾಗುವುದು ಎಂದು ಭಾರತದ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

ಚುನಾವಣಾ ಸ್ಪರ್ಧಿಗಳಿಗೆ ನಾಮಪತ್ರ ಸಲ್ಲಿಸಲು ಫೆ. ೧೫ ರಂದು ಕೊನೆಯ ದಿನವಾಗಿದ್ದು, ಮತದಾನ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ  ನಡೆಯಲಿದೆ ಎಂದು ವರದಿಯಾಗಿದೆ.

ಇನ್ನು ಉತ್ತರಪ್ರದೇಶದಲ್ಲಿ 10, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ತಲಾ 6, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 5, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ 4, ಒಡಿಶಾ, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 3 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿದುಬಂದಿದೆ.

Advertisement

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement