‘ಫ್ರೆಬ್ರವರಿ 24,25 ರಂದು ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ’- ಸಿಎಂ

ಬೆಂಗಳೂರು: ಸಂವಿಧಾನ ಜಾರಿಗೆ ಬಂ ದು 75ನೇ ವರ್ಷಾಚರಣೆಯ ಅಂಗವಾಗಿ ಅರಮನೆ ಮೈದಾನದಲ್ಲಿ ಫೆ. 24 ಮತ್ತು 25ರಂದು ‘ಸಂವಿಧಾನ ಮತ್ತು ರಾಷ್ಟ್ರೀ ಯ ಏಕತೆ ಸಮಾವೇಶ’ ನಡೆಯಲಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಮಾವೇಶದ ಪೂರ್ವಭಾವಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ (ಐಸೆಕ್) ಮತ್ತು ರಾಷ್ಟ್ರೀಯ ಕಾನೂನು ಶಾಲೆಯ ಸಹಯೋಗದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ವಿಚಾರ ಸಂಕಿರಣ ಹಾಗೂ ಕ್ರೈ ಸ್ ಶಿಕ್ಷಣ ಸಂ ಸ್ಥೆಗಳ ವಿದ್ಯಾರ್ಥಿ ಗಳ ವಿಜ್ಞಾನ ವಸ್ತು ಪ್ರದರ್ಶ ನ ಹಮ್ಮಿಕೊಳ್ಳಲಾಗಿದೆ. ಸಂವಿಧಾನದ ಮಹತ್ವ ಹಾಗೂ ಮೌಲ್ಯದ ಕುರಿತು ಅರಿವು ಮೂಡಿಸುವುದು ಹಾಗೂ ರಾಷ್ಟ್ರೀಯ ಏಕತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗುತ್ತಿದೆ ಎಂದರು.

Advertisement

ಸಮಾವೇಶಕ್ಕೆ ಪೂರ್ವಭಾವಿಯಾಗಿ ಜನವರಿ 26 ರಿಂದ “ಸಂವಿಧಾನ ಜಾಗೃತಿ ಜಾಥಾ” ಆಯೋಜಿಸಲಾಗುವುದು. ಈ ಜಾಥಾವು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಸಂವಿಧಾನದ ಮಹತ್ವ, ರಾಷ್ಟ್ರೀಯ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಾಗುವುದು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ಸಮಾರಂಭದಲ್ಲಿ ಒಂದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ವಿವಿಧ ವಿಷಯಗಳ ಕುರಿತ ಪರಿಣತರ ಚರ್ಚೆಯನ್ನು ಆಧರಿಸಿ, ನಿರ್ಣಯಗಳನ್ನು ಕೈಗೊಳ್ಳಲಾಗುವುದು

ಇಂದಿನ ಸಮಾಜ ಎದುರಿಸುತ್ತಿರುವ ಎಲ್ಲ ಸಮಸ್ಯೆ, ಸವಾಲುಗಳಿಗೆ ಸಂವಿಧಾನದಲ್ಲಿ ಉತ್ತರವಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಿದೆ

ಸಮಾವೇಶದಲ್ಲಿ ಅತ್ಯುತ್ತಮ ಸಂಪನ್ಮೂಲ ವ್ಯಕ್ತಿಗಳು ಹಾಗೂ ಅತಿಥಿಗಳನ್ನು ಆಹ್ವಾನಿಸಿ, ಅತ್ಯುತ್ತಮ ಚರ್ಚಾಗೋಷ್ಠಿಗಳನ್ನು ಆಯೋಜಿಸುವಂತೆ ಸೂಚಿಸಲಾಯಿತು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement