ದೆಹಲಿ : ಸಂಸತ್ತಿನಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹೊಸ ದಾಖಲೆಯನ್ನು ಬರೆದಿದ್ದಾರೆ. ಸತತ ಆರು ಬಾರಿ ಬಜೆಟ್ ಮಂಡಿಸಿದ ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಮೊರಾರ್ಜಿ ದೇಸಾಯಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಸತತ 5 ಬಜೆಟ್‍ಗಳನ್ನು ಮಂಡಿಸಿದ ಕೇಂದ್ರ ಬಜೆಟ್ ಮಂಡಿಸಿದ ಮನಮೋಹನ್ ಸಿಂಗ್,ಅರುಣ್ ಜೇಟ್ಲಿ,ಚಿದಂಬರಂ ಮತ್ತು ಯಶವಂತ್ ಸಿನ್ಹಾ ದಾಖಲೆಯನ್ನು ಅವರು ಹಿಂದಿಕ್ಕಿದ್ದಾರೆ. ಇಂದಿರಾ ಗಾಂಧಿ ನಂತರ ಬಜೆಟ್ ಮಂಡಿಸಿದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಮೊರಾರ್ಜಿ ದೇಸಾಯಿ ಹಣಕಾಸು ಸಚಿವರಾಗಿ ಐದು ವಾರ್ಷಿಕ ಬಜೆಟ್ ಮತ್ತು ಒಂದು ಮಧ್ಯಂತರ ಬಜೆಟ್ ಅನ್ನು 1959-1964 ರ ನಡುವೆ ಮಂಡಿಸಿದ್ದರು.