ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಿಎಂ

ಬಳ್ಳಾರಿ: ರಾಜ್ಯ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ತೋರಣಗಲ್ ನಲ್ಲಿಂದು ಸುದ್ದಿಗಾರರೊಂದಿಗೆ ಅವರು, ಪೆಟ್ರೋಲ್ , ಡೀಸೆಲ್ ದರ ಏರಿಕೆ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ . ರಾಜ್ಯದ ಅಭಿವೃದ್ಧಿ ಯೋಜನೆಗಳಿಗಾಗಿ ತೈಲ ದರ ಏರಿಕೆ ಮಾಡಲಾಗಿದೆ. ಖಾತರಿ ಯೋಜನೆಗಳಿಗೆ ಈ ವರ್ಷ 60 ಸಾವಿರ ಕೋಟಿ ಅಗತ್ಯವಿದ್ದು, ಸಂಪನ್ಮೂಲ ಕ್ರೋಢೀಕರಣ ಮಾಡಬೇಕಾಗಿದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಕುರಿತಂತೆ ಬರುವ ಸೋಮವಾರ ಸಭೆ ನಡೆಸಲಾಗುವುದು. ಇದಕ್ಕೂ ಮುನ್ನ ಸಂಬಂಧಪಟ್ಟ ಸಚಿವರು ಮಾತುಕತೆ ನಡೆಸಲಿದ್ದಾರೆ . ತುಂಗಭದ್ರಾ ಸಮಾನಾಂತರ ಜಲಾಶಯ ನಿರ್ಮಾಣ ಮಾಡುವ ಸಂಬಂಧ ಶೀಘ್ರದಲ್ಲೇ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

Advertisement

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement