ಲಕ್ನೋ:ಮದುವೆಗೆ ತೆರಳುತ್ತಿದ್ದ ಬಸ್ ಮೇಲೆ 11,000 ವೋಲ್ಟ್ ಹೈಟೆನ್ಷನ್ ವಿದ್ಯುತ್ ತಂತಿ ಬಿದ್ದು ಬಸ್ ಸುಟ್ಟು ಕರಕಲಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.
ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 36 ಜನ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.
ಸ್ವಲ್ಪ ಸಮಯದಲ್ಲೇ ಬೆಂಕಿ ಭೀಕರ ಸ್ವರೂಪ ಪಡೆದುಕೊಂಡಿದ್ದು, ಬಸ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.