ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ – ಇಬ್ಬರು ಮೃತ್ಯು, ಮೂವರಿಗೆ ಗಾಯ

ಮುಂಬೈ: ಮುಂಬೈನ ಕಾಂದಿವಲಿಯಲ್ಲಿರುವ ಬಹುಮಹಡಿ ಕಟ್ಟದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಮೃತರನ್ನು ಗ್ಲೋರಿ ವಾಲ್ಫಾಟಿ (43) ಮತ್ತು ಜೋಸು ಜೆಮ್ಸ್ ರಾಬರ್ಟ್ (8) ಎಂದು ಗುರುತಿಸಲಾಗಿದೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸುತಿದ್ದಂತೆ ಘಟನಾ ಸ್ಥಳಕ್ಕೆ ಎಂಟು ಅಗ್ನಿಶಾಮಕ ವಾಹನ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement

ಇನ್ನು ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement