ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಯೊಂದರ ಏಳನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿದ್ದು ಇದಕ್ಕೆ ಕಾರಣನಾದ ಶಾಲೆಯ ಮುಖ್ಯ ಶಿಕ್ಷಕನನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
13 ವರ್ಷದ ಬಾಲಕಿಯ ಆರೋಗ್ಯ. ದಲ್ಲಿ ಇತ್ತೀಚೆಗೆ ಏರುಪೇರಾಗಿತ್ತು. ಚಿಕಿತ್ಸೆಗಾಗಿ ಪೋಷಕರು ಆಸ್ಪತ್ರೆಗೆ ಕರೆದೊಯ್ದ ವೇಳೆ ಆಕೆ ಗರ್ಭಿಣಿಯಾಗಿರುವ ವಿಷಯ ಗೊತ್ತಾಗಿದೆ.
ಬಾಲಕಿಯನ್ನು. ವಿಚಾರಿಸಿದಾಗ ನಡೆದ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾಳೆ. ಬಾಲಕಿಯ ದೂರು ಆಧರಿಸಿ ಮುಖ್ಯ ಶಿಕ್ಷಕನನ್ನು ಬಂಧಿಸಿರುವ ಗ್ರಾಮಾಂತರ ಠಾಣೆ ಪೊಲೀಸರು ಪೋಕ್ರೋ ಪ್ರಕರಣ ದಾಖಲಿಸಿದ್ದಾರೆ. ನ್ಯಾಯಾಲಯದ ಎದುರು ಶಿಕ್ಷಕನನ್ನು ಹಾಜರು ಪಡಿಸಲಾಗಿದೆ ಎಂದು ತಿಳಿದು ಬಂದಿದೆ.
 
				 
         
         
         
															 
                     
                     
                     
                     
                    


































 
    
    
        