ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಅಶೋಕ್ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್‌ನವರು ದ್ವೇಷದ ರಾಜಕಾರಣ ಮಾಡ್ತಿದ್ದಾರೆ. ಹೈಕೋರ್ಟ್ ಈ ವಿಚಾರವಾಗಿ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಲೋಕಸಭಾ ಚುನಾವಣೆಯಾದ ಕೂಡಲೇ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದಾರೆ. ಇದು ಪಕ್ಕಾ ದ್ವೇಷದ ರಾಜಕಾರಣವಾಗಿದೆ. ಇದಕ್ಕೆ ಪೂರಕವಾಗಿ, ನಮ್ಮನ್ನ ನ್ಯಾಯಾಲಯಕ್ಕೆ ಕರೆಸಿದ್ರಿ ಎಂದು ಡಿ.ಕೆ ಶಿವಕುಮಾರ್ ಮಾತಾಡಿದ್ದಾರೆ. ಇಂತಹ ದ್ವೇಷದ ರಾಜಕಾರಣ ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿನಲ್ಲಿ ಇಂತಹ ದ್ವೇಷದ ರಾಜಕೀಯ ಇತ್ತು. ಈಗ ರಾಜ್ಯಕ್ಕೂ ಇದು ಬಂದಿದೆ. ಪರಮೇಶ್ವರ್ ಕೂಡಾ ಬಿಎಸ್‌ವೈ ವಿರುದ್ಧ ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಿದ್ದರು. ಚುನಾವಣೆಯಾದ ಬೆನ್ನಲ್ಲೇ ಇವರು ನೊಟೀಸ್ ನೀಡಿ ದ್ವೇಷದ ರಾಜಕೀಯ ಮಾಡ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.