ಬೆಂಗಳೂರು: ಹುಲಿ ಉಗುರು ಧರಿಸಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ನ.6 ರವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.
ವರ್ತೂರು ಸಂತೋಷ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು 2ನೇ ಎಸಿಜೆಎಂ ಕೋರ್ಟ್ ನ ಮ್ಯಾಜಿಸ್ಟ್ರೇಟ್ ನಿವಾಸಕ್ಕೆ ಇಂದು ಹಾಜರು ಪಡಿಸಿದ್ದರು.
ಇನ್ನು ವಿಚಾರಣೆ ನಡೆಸಿದ ಎಸಿಜೆಎಂ ನ್ಯಾಯಧೀಶರು ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.